ಇತ್ತೀಚಿನ ಸುದ್ದಿ
ರಾಜ್ಯ ಬಿಜೆಪಿಗೆ ಹೊಸ ಸಾರಥಿ: ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ
15/11/2023, 16:22
ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿದ ವಿಜಯೇಂದ್ರ ಅವರು ಪೂಜೆಯಲ್ಲಿ ಪಾಲ್ಗೊಂಡರು. ನಂತರ ಭಾರತ ಮಾತೆ ಭಾವಚಿತ್ರಕ್ಕೆ ಮತ್ತು ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಇದಕ್ಕೆ ಮುನ್ನ ವಿಜಯೇಂದ್ರ ಅವರು
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರು, ಸಂಸದರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.