5:35 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಮಕ್ಕಳ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ವಾತಾವರಣ ಅಗತ್ಯ: ಸಿ.ಎ. ಶಾಂತಾರಾಮ ಶೆಟ್ಟಿ

15/11/2023, 16:30

ಮಂಗಳೂರು(reporterkarnataka.com): ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸ್ಥಳೀಯವಾಗಿ ಒದಗಿಸಿ ಕೊಡ ಬೇಕಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಸಿ.ಎ . ಶಾಂತಾರಾಮ ಶೆಟ್ಟಿ ಹೇಳಿದರು.
ಅವರು ಬುಧವಾರ ನಗರದ ಲಾಲ್ ಭಾಗ್ ನ ವನಿತಾ ಪಾರ್ಕ್ ನಲ್ಲಿ ಭಾರತೀಯ ರೆಡ್ ಕ್ರಾಸ್ ದ.ಕ. ಜಿಲ್ಲಾ ಘಟಕ, ದೇವಿಕಾ ಯೋಗ ತರಬೇತಿ ಕೇಂದ್ರ, ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರದ ಮತ್ತು ಬಿಜೈ ಕಾಪಿಕಾಡ್ ಅಂಗನವಾಡಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಮಗು ಆರಂಭದಲ್ಲಿ ಮನೆಯಲ್ಲಿ ತಂದೆ ತಾಯಿ ಪೋಷಕರ ಜೊತೆ ಬೆಳೆಯುತ್ತದೆ. ಆ ಸಂದರ್ಭದಲ್ಲಿ ಅದು ಅವರ ಚಟುವಟಿಕ ಗಳನ್ನು ನೋಡಿ ತಾನು ಅನುಸರಿಸುತ್ತದೆ, ಮತ್ತು ಕಲಿಯಲು ಆರಂಭಿಸುತ್ತದೆ. ಈ ಸಂದರ್ಭದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣ ದೊರೆತಾಗ ಮುಂದೆ ಸಮಾಜದಲ್ಲಿ ಆ ಮಕ್ಕಳು ಉತ್ತಮ ಗುಣ ನಡತೆಯ ವ್ಯಕ್ತಿ ಗಳಾಗಿ ರೂಪು ಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಮತ್ತು ಸಮಾಜದ ಸಾಮೂಹಿಕ ಹೊಣೆಗಾರಿಕೆ ಇದೆ ಎಂದು ಶಾಂತರಾಮ ಶೆಟ್ಟಿ ತಿಳಿಸಿದರು.
ದ.ಕ. ರೆಡ್ ಕ್ರಾಸ್ ಘಟಕದ ಮಹಿಳಾ ವಿಭಾಗದ ನಿರ್ದೇಶಕಿ ಡಾ.ಸುಮನಾ ಮಾತ ನಾಡುತ್ತಾ,ತಾಯಿ ಮತ್ತು ಮಕ್ಕಳ ಆರೋಗ್ಯ ಕ್ಕೆ ಸಂಬಂಧಿಸಿದಂತೆ ಸಮಾಜದ ಮುಖ್ಯ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೆಡ್ ಕ್ರಾಸ್ ಘಟಕ ಹಮ್ಮಿಕೊಂಡು ಬಂದಿದೆ ಮಂದೆಯೂ ಸಹಕಾರ ನೀಡಲಿದೆ ಎಂದರು.
ಸಮಾರಂಭದಲ್ಲಿ ಭಾರತೀಯ ರೆಡ್ ಕ್ರಾಸ್ ಘಟಕದ ಹಿರಿಯ ಸಲಹೆಗಾರ ಪ್ರಭಾಕರ ಶರ್ಮಾ, ರವೀಂದ್ರ ನಾಥ ಉಚ್ಚಿಲ್ , ಭಾರತೀಯ ರೆಡ್ ಕ್ರಾಸ್ ದ.ಕ. ಜಿಲ್ಲಾ ಆಡಳಿತ ಸಮಿತಿಯ ನಿರ್ದೇಶಕ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಚಲನಚಿತ್ರ ನಟ ಮೈಮ್ ರಾಮ್ ದಾಸ್, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ದೇವಿಕಾ ಯೋಗ ತರಬೇತಿ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ, ಪತಂಜಲಿ ಯೋಗ ತರಬೇತಿ ಕೇಂದ್ರದ ಶಿಕ್ಷಕಿ ಪ್ರಭಾ ಚಂದ್ರಶೇಖರ್, ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಕಾರ್ಯ ಕರ್ತೆ ನಂದಾ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಭಾವಹಿಸಿದ್ದರು ದರು. ಭಾರತೀಯ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಸದಸ್ಯರಾದ ಭಾಸ್ಕರ ರೈ ಕಟ್ಟ ವಂದಿಸಿದರು. ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಅನಘಾ ರಿಫೈನರಿಯ ಮಾಲಕ ಸಾಂಬಶಿವರಾವ್ ಅವರು ಅಂಗನವಾಡಿ ಮಕ್ಕಳಿಗೆ ಕೊಡುಗೆ ಯಾಗಿ ನೀಡಿದ ಊಟದ ಬಟ್ಟಲನ್ನು ಅತಿಥಿಗಳು ಮಕ್ಕಳಿಗೆ ಹಸ್ತಾಂತರಿಸಿದರು. ಚಲನಚಿತ್ರ ನಟ ಮೈಮ್ ರಾಮ್ ದಾಸ್ ಮಕ್ಕಳಿಗೆ ಹಾಡು ಮತ್ತು ನಟನೆಯ ತರಬೇತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು