ಇತ್ತೀಚಿನ ಸುದ್ದಿ
ರಾಜ್ಯದಲ್ಲೇ ವಿನೂತನ ಯೋಜನೆ: ಗ್ರಾಮೀಣ ಮಕ್ಕಳ ಕಂಪ್ಯೂಟರ್ ಸಾಕ್ಷರತೆಗಾಗಿ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಬಸ್ ಗೆ 18ರಂದು ಹಸಿರು ನಿಶಾನೆ
15/11/2023, 20:47
ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವದ ಸವಿ ನೆನಪಿಗಾಗಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಯೋಜನೆಯಾದ ಗ್ರಾಮೀಣ ವಿದ್ಯಾರ್ಥಿ ಗಳಿಗೆ ಕಂಪ್ಯೂಟರ್ ಸಾಕ್ಷರತೆ ನೀಡಲು ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಬಸ್ ಗೆ ಹಸಿರು ನಿಶಾನೆ ಕಾರ್ಯಕ್ರಮ ನಗರದ ಜೆಪ್ಪು ಸೈಂಟ್ ಜೆರೋಸಾ ಪ್ರೌಢಶಾಲೆಯ ಮರಿಯ ಜ್ಯೋತಿ ಹಾಲ್ ನಲ್ಲಿ ನವೆಂಬರ್ 18ರಂದು ನಡೆಯಲಿದೆ.
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ ಬೆಳಗ್ಗೆ 8.45ಕ್ಕೆ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಡಿ. ಆರ್. ನಾಯಕ್, ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ವೈ. ಅಬ್ದುಲ್ಲ ಕುಂಞಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮುಹಮ್ಮದ್ ಹನೀಫ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.