12:53 PM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕಥಾ ಕಮ್ಮಟ

16/11/2023, 21:08

ಉಡುಪಿ(reporterkarnataka.com): ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದುನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ. ಮುರಳೀಧರ ಉಪಾಧ್ಯ ಹೇಳಿದರು.
ಅವರು ಗುರುವಾರ ಎಂಜಿಎಂ ಕಾಲೇಜು , ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಮಾಸ್ತಿ , ಶಿವರಾಮ ಕಾರಂತರು, ಲಂಕೇಶ್ , ಅನಂತಮೂರ್ತಿ, ವೈದೇಹಿ ಇಂಥವರ ಕಥೆಗಳನ್ನು ವಿದ್ಯಾರ್ಥಿಗಳು ಓದಬೇಕು. ಇಂತಹ ಕಮ್ಮಟಗಳ ಮೂಲಕ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕಥೆಗಾರರು ಆಗಲು ಸಾಧ್ಯ ಎಂದರು.
ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ , ಎಂಜಿಎಂ ಕಾಲೇಜು ಐಕ್ಯೂಎಸಿ ಮುಖ್ಯಸ್ಥೆ ಪ್ರೊ. ಶೈಲಜ, ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪುತ್ತಿ ವಸಂತ್ ಕುಮಾರ್ ಸ್ವಾಗತಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು.
ಕಸಾಪ ತಾಲೂಕು ಘಟಕಾಧ್ಯಕ್ಷ
ರವಿರಾಜ್ ಎಚ್. ಪಿ. ಪ್ರಾಸ್ತಾವಿಕಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು