3:43 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರು: ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ; ಸಾಂಸ್ಕೃತಿಕ ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ

17/11/2023, 18:50

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21ರಂದು ನಡೆಯಲಿದೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದರು.
ಸಮ್ಮೇಳನದ ಪ್ರಯುಕ್ತ ಬೆಳಗ್ಗೆ 9ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10ರಿಂದ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮ್ಮೇಳನದಲ್ಲಿ ‘ಪತ್ರಿಕೋದ್ಯಮದ ಹೊಸ ಆಯಾಮಗಳು ‘ ಎಂಬ ವಿಷಯದಲ್ಲಿ ಸಮ್ಮೇಳನದ ಪ್ರಮುಖ ಗೋಷ್ಠಿ ನಡೆಯಲಿದೆ. ಈ ಗೋಷ್ಠಿ ಉದಯವಾಣಿ ದೈನಿಕದ ಸಂಪಾದಕ ಅರವಿಂದ ನಾವುಡರ ಅಧ್ಯಕ್ಷತೆಯಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯಸ್ಥ ಹರ್ಷ ವಿಷಯ ಮಂಡನೆ ಮಾಡಲಿದ್ದಾರೆ. ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಘಟಕಗಳ ಪತ್ರಕರ್ತ ಪ್ರತಿನಿಧಿಗಳ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಶಾಸಕರಾದ ವೇದವ್ಯಾಸ ಕಾಮತ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಡಾ.ವೈ ಭರತ್ ಶೆಟ್ಟಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಹರೀಶ್ ಪೂಂಜಾ ಹಸಿರು -ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಮ್ಮೇಳನದ ಕಾರ್ಯಕ್ರಮ ಗಳಿಗೆ ರಾಜೇಶ್ ನಾಯ್ಕ್ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ನೆರವೇರಿಸಲಿದ್ದಾರೆ. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಸಮ್ಮೇಳನದ ಕಿಟ್ ಬಿಡುಗಡೆ ಗೊಳಿಸಲಿದ್ದಾರೆ.
ಸಮಾರಂಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ,ಡಾ. ಮಂಜುನಾಥ್‌ ಭಂಡಾರಿ, ಪ್ರತಾಪ್ ಸಿಂಹ ನಾಯಕ್, ಬಿ.ಎಂ. ಫಾರೂಕ್, ಬೊಜೇ ಗೌಡ. ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ , ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಇಫ್ತಿಕಾರ್ ಅಲಿ, ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಸುಧಾಕರ ಕೊಟ್ಟಾರಿ, ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕರು ಮತ್ತು ವಲಯ ಮುಖಸ್ಥರಾದ ಗಾಯತ್ರಿ, ಶ್ರೀರಾಮ ಫೈನಾನ್ಸ್ ಝೊನಲ್ ಹೆಡ್ ಶರತ್‌ ಚಂದ್ರ ಭಟ್ ಕಾಕುಂಜೆ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ರಿ)ದ ಅಧ್ಯಕ್ಷ ಸುಚರಿತ ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್‌ ಸೊಸೈಟಿ ಅಧ್ಯಕ್ಷ ಸಿ.ಎ ಶಾಂತರಾಮ ಶೆಟ್ಟಿ, ಕ್ರೆಡಾಯಿ ಮಂಗಳೂರು ಅಧ್ಯಕ್ಷ ವಿನೋದ್ ಎ.ಆರ್.ಪಿಂಟೊ, ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಮೊದಲಾದವರು ಭಾಗವಹಿಸಲಿದ್ದಾರೆ
ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು