5:48 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನೇಜಾರು ಭೀಕರ ಹತ್ಯಾಕಾಂಡ: ಸಂತ್ರಸ್ತ ಕುಟುಂಬಸ್ಥರ ಭೇಟಿಯಾದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್; ಸೂಕ್ತ ತನಿಖೆಯ ಭರವಸೆ

17/11/2023, 20:23

ಉಡುಪಿ(reporterkarnataka.com): ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಾಂತ್ವನ ಹೇಳಿದರು.
ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರ್ಕಾರವಿದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದು ಸಚಿವರು ಪತ್ರಕರ್ತರಿಗೆ ತಿಳಿಸಿದರು. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದ್ದು, ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಉಡುಪಿ ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆ, ಇಂತಹ ಜಿಲ್ಲೆಯಲ್ಲಿ
ಹೀಗಾಗಬಾರದಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಖುತ್ತೇವೆ, ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.
ಆರೋಪಿ ಸೈಕೋ ರೀತಿಯಲ್ಲಿ ವರ್ತಿಸಿದ್ದಾನೆ. 20 ನಿಮಿಷದಲ್ಲಿ ಕೃತ್ಯವೆಸಗಿದ ಆತನ ಮೆಂಟಲ್ ಸ್ಟೇಟಸ್ ಯಾವ ರೀತಿ ಇರಬಹುದು?. ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ಮೂಲಕ ತನಿಖೆಗೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿಸಲಾಗುವುದು ಎಂದರು. ನಾನು ಬೆಳಗಾವಿಯಲ್ಲಿದ್ದರೂ ಸಂತ್ರಸ್ತ ಕುಟುಂಬದ ಜೊತೆಗೆ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಟರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೆ ಎಂದು ಸಚಿವರು ಹೇಳಿದರು.
ಕಳೆದ ಭಾನುವಾರ ತಾಯಿ, ಮಗಳು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿತ್ತು.
ಈ ವೇಳೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು