6:36 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ

18/11/2023, 17:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ವೇದಿಕೆಯ ಅಧ್ಯಕ್ಷ ಸೋಮೇಶ್ ಮರ್ಕಲ್ ಹೇಳಿದರು.

ಅವರು ಬಾಳೂರಿನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವದು, ಚೀನಾದ ಹ್ಯಾಂಗ್ ಝ್ ನಲ್ಲಿ ಏಷ್ಯನ್ ಪ್ಯಾರಾಲಂಪಿಕ್ ಕ್ರೀಡಾಕೂಟದಲ್ಲಿ ಬಾಳೂರು ಗ್ರಾಮದ ಹೆಸರನ್ನು ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿದ ಸ್ಥಳೀಯ ಕ್ರೀಡಾಪಟು ರಕ್ಷಿತಾರಾಜು ಹಾಗೂ ಅವರ ಕೋಚ್ ರಾಹುಲ್ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು. ನಂತರ ಬಾಳೂರು ಹೋಬಳಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಗುವುದು. ಇದೇ ತಿಂಗಳ 20ರಂದು ಬೆಳಗ್ಗೆ 10 ಗಂಟೆಗೆ ರಕ್ಷಿತಾರಾಜು ಅವರನ್ನು ಕಲ್ಲಕ್ಕಿ ಸರ್ಕಾರಿ ಶಾಲೆಯಿಂದ ಬಾಳೂರು ದರ್ಬಾರ್ ಪೇಟೆವರೆಗೆ ಮೆರವಣಿಗೆ ನಡೆಸಲಾಗುವುದು. ನಂತರ 11 ಗಂಟೆಗೆ ದರ್ಬಾರ್ ಪೇಟೆ ಅಂಗನವಾಡಿ ಬಳಿ ಸಭಾ ಕಾರ್ಯಕ್ರಮವನ್ನು ಶಾಸಕರಾದ ನಯನಾ ಮೋಟಮ್ಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್, ಬಾಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಕ್ರೀಡಾ ಸಾಧಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು