7:22 PM Thursday8 - May 2025
ಬ್ರೇಕಿಂಗ್ ನ್ಯೂಸ್
Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮತ್ತೆ ‘ಸ್ಟ್ರೀಟ್ ಫುಡ್ ಫಿಯೆಸ್ಟ’; 2024 ಜನವರಿ 24ರಿಂದ 5 ದಿನಗಳ ಆಹಾರ ಸಂಭ್ರಮ; ಬ್ಯಾಂಡ್ ಮ್ಯೂಸಿಕ್, ಫೈರ್ ಡ್ಯಾನ್ಸ್, ಸ್ಟ್ರೀಟ್ ಸರ್ಕಸ್, ಟೈಗರ್ ಡ್ಯಾನ್ಸ್

18/11/2023, 21:12

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟ”ವು 2024 ರ ಜನವರಿ 24 ರಿಂದ 5 ದಿನಗಳ ಕಾಲ ನಡೆಯಲಿದೆ.
ಶಾಸಕ ವೇದವ್ಯಾಸ್ ಕಾಮತ್ ಅವರು ಲಾಂಛನ ಬಿಡುಗಡೆ ಸಂದರ್ಭದಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.
2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸಿನಿಂದ ಪ್ರೇರಣೆಗೊಂಡು ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟ” ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು.
ವಿಶಿಷ್ಟ ರೀತಿಯಲ್ಲಿ ಲಾಂಛನ ಬಿಡುಗಡೆ: ನಗರದಲ್ಲಿ ನಡೆಯಲಿರುವ ಸ್ಟ್ರೀಟ್ ಫುಡ್ ಫಿಯೆಸ್ಟಾದ ಲಾಂಛನವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ತಯಾರಿಸಲಾಗಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಡುಗಡೆಗೊಳಿಸಿದರು.
ಸ್ಟ್ರೀಟ್ ಫುಡ್ ಫಿಯೆಸ್ಟಾ ನಡೆಯಲಿರುವ ಸ್ಥಳ ಮತ್ತು ಸಮಯ: ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ” ದವರೆಗೆ ಫಿಯೆಸ್ಟಾ ನಡೆಯಲಿದೆ. ಪ್ರತಿ ನಿತ್ಯ ಸಂಜೆ 5 ರಿಂದ ರಾತ್ರಿ 10.30 ರವರೆಗೆ ಆಹಾರ ಪದಾರ್ಥಗಳನ್ನು ಪ್ರದರ್ಶಿಸಲಾಗುತ್ತದೆ ಮತ್ತು ಮಾರಾಟ ಮಾಡಲಾಗುತ್ತದೆ. ಕೊನೆಯ ಮೂರು ದಿನ ( ಶುಕ್ರವಾರ ಶನಿವಾರ ಮತ್ತು ಭಾನುವಾರ) ಮಾತ್ರ ಉತ್ಸವವು 3 ಗಂಟೆಯಿಂದ 10.30 ತನಕ ನಡೆಯಲಿದೆ.
ಮಳಿಗೆ ನೋಂದಣಿ: ಕಳೆದ ಬಾರಿ 150 ಕ್ಕೂ ಹೆಚ್ಚು ಆಹಾರ ಮಳಿಗೆಗಳು ಬಂದಿದ್ದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಈ ಬಾರಿ 200 ಕ್ಕೂ ಹೆಚ್ಚು ಆಹಾರ ಮಳಿಗೆಗಳು ಬರುವ ನಿರೀಕ್ಷೆಯಿದ್ದು ಆಹಾರ ಮಳಿಗೆಗೆ ಈಗಾಗಲೇ ವಿಚಾರಣೆಗಳು ಆರಂಭವಾಗಿವೆ. ಅದರಂತೆ ಇದೇ ನವೆಂಬರ್ 20ರಂದು ಆಹಾರ ಉತ್ಸವಕ್ಕೆ ಸಂಬಂಧಿಸಿದ ವೆಬ್ಸೈಟ್ ಲೋಕಾರ್ಪಣೆಗೊಳ್ಳಲಿದ್ದು ಅದರಲ್ಲಿ ರಿಜಿಸ್ಟರ್ ಆಗುವ ಮೂಲಕವೇ ತಮ್ಮ ಮಳಿಗೆಗಳನ್ನು ನೋಂದಾಯಿಸಿಕೊಳ್ಳತಕ್ಕದ್ದು.
ಮಂಗಳೂರಿಗೆ ಬನ್ನಿ: ನಗರದೊಂದಿಗೆ ನೇರ ಸಂಪರ್ಕ ಹೊಂದಿರುವ ಮುಂಬೈ ದೆಹಲಿ ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು “ಬನ್ನಿ ಜೊತೆಗೂಡಿ ಮಂಗಳೂರಿನ ಪ್ರವಾಸೋದ್ಯಮ ಧ್ವಜವನ್ನು ಬಾನೆತ್ತರಕ್ಕೆ ಹಾರಿಸೋಣ” ಎಂಬ ಧ್ಯೇಯ ವಾಕ್ಯದಡಿಯಲ್ಲಿ” ಇನ್ನೂ ಹೆಚ್ಚಿನ ರೀತಿಯಲ್ಲಿ ಆಕರ್ಷಿಸುವ ಯೋಜನೆ ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು. ಆ ಮೂಲಕ ಪ್ರವಾಸೋದ್ಯಮಕ್ಕೆ ಹೊಂದಿಕೊಂಡಿರುವ ಇತರ ವಲಯಗಳನ್ನೂ ಬೆಳೆಸುವ ನಿಟ್ಟಿನಲ್ಲಿ ಆಹಾರ ಉತ್ಸವದ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.
ಕಳೆದ ಬಾರಿಗಿಂತ ಈ ಬಾರಿ ವಿಭಿನ್ನತೆ: ಹಿರಿಯರಿಗೆ, ಮಕ್ಕಳಿಗೆ ಕುಟುಂಬ ಸಮೇತ ಬರುವವರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಅಲ್ಲಲ್ಲಿ ಕುಳಿತು ಆಹಾರ ಸವಿಯಲು ಅವಕಾಶ ಕಲ್ಪಿಸಲಾಗುತ್ತದೆ. ಹೆಚ್ಚುವರಿ ಮಕ್ಕಳ ಆಟದ ಜೋನ್ ಸ್ಥಾಪಿಸಲಾಗುತ್ತದೆ.
ಉತ್ಸವದ ಸಮಯದಲ್ಲಿ ಹಲವು ವೇದಿಕೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉತ್ಸವದಲ್ಲಿ ಆತಿಥ್ಯ ಉದ್ಯಮ, ಸ್ವತಂತ್ರ ಆಹಾರ ಪೂರೈಕೆದಾರರು, ಐಸ್ ಕ್ರೀಮ್ ವಲಯ ಮತ್ತು ಗೃಹ ಉದ್ಯಮ ಸೇರಿದಂತೆ ವಿವಿಧ ವಲಯಗಳ ಭಾಗವಹಿಸುವಿಕೆ ಇರುತ್ತದೆ.
ನಗರದಲ್ಲಿ ವಾಸಿಸುವ ಗುಜರಾತ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಕೇರಳದ ಜನರು ತಮ್ಮ ರಾಜ್ಯದ ವಿವಿಧ ಆಹಾರ ಉತ್ಪನ್ನಗಳನ್ನು ಕಳೆದ ಬಾರಿಯಂತೆ ಈ ಬಾರಿಯೂ ಪ್ರದರ್ಶಿಸಲಿದ್ದಾರೆ. ಇನ್ನು ಕಳೆದ ಬಾರಿಯಂತೆ ಕುದುರೆ ಸವಾರಿ, ಒಂಟೆ ಸವಾರಿ, ವಿಂಟೇಜ್ ಕಾರುಗಳ ಪ್ರದರ್ಶನ ನಡೆಯಲಿದೆ. ಸೆಲ್ಫಿ ಕೌಂಟರ್ ಸಹ ಇರುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನೃತ್ಯ, ಗಾಯನ, ಮಿಮಿಕ್ರಿ, ಮ್ಯಾಜಿಕ್ ಶೋ, ವಾದ್ಯ ಗೋಷ್ಠಿ, ಬ್ಯಾಂಡ್ ಮ್ಯೂಸಿಕ್, ಫೈರ್ ಡ್ಯಾನ್ಸ್, ಸ್ಟ್ರೀಟ್ ಸರ್ಕಸ್, ಹುಲಿ ನೃತ್ಯ ಮತ್ತು ಮುಂತಾದವುಗಳನ್ನು ಒಳಗೊಂಡಿರುತ್ತದೆ.
ಎರಡು ರಸ್ತೆಗಳು ಆಕರ್ಷಕ ಬೆಳಕಿನಿಂದ ಪ್ರಕಾಶಿಸಲ್ಪಡುತ್ತವೆ ಮತ್ತು ಸುಂದರೀಕರಣದ ಭಾಗವಾಗಿ ವರ್ಣರಂಜಿತ ಲ್ಯಾಂಟರ್ನ್ಗಳು ಇರುತ್ತವೆ.


ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ವೇದಿಕೆಗಳಲ್ಲಿ ಆಚರಿಸಲು ಅವಕಾಶ ಮಾಡಿಕೊಡಲಾಗುವುದು. ಆಹಾರ ತಯಾರಕರಿಗೆ ತಮ್ಮ ಬ್ರ್ಯಾಂಡ್‌ಗಳನ್ನು ಪ್ರಚಾರ ಮಾಡಲು ಅವಕಾಶವನ್ನು ಒದಗಿಸಲಾಗುತ್ತದೆ ಎಂದು ತಿಳಿಸಲಾಯಿತು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ, ಬಿಜೆಪಿ ಮಂಡಲದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಹಾಗೂ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು