9:57 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ; ನೆಹರೂ ಭಾವಚಿತ್ರಕ್ಕೆ ಪುಷ್ಪನಮನ

19/11/2023, 10:57

ಕಾರ್ಕಳ(reporterkarnataka.com): ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು.
ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಕ್ಕಳ ದಿನಾಚರಣೆಯನ್ನು ಜ್ಯೋತಿ ಪ್ರಜ್ವಲನದ ಮೂಲಕ ಮಂಗಳೂರು ಕೆಎಂಎಫ್ ನಿರ್ದೇಶಕರು ಮತ್ತು ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಸಾಣೂರು ನರಸಿಂಹ ಕಾಮತ್ ಉದ್ಘಾಟಿಸಿದರು.
ಮಕ್ಕಳಿಗೆ ನಾವು ನೀಡುವ ಪ್ರೀತಿ ಮತ್ತು ಕಾಳಜಿ ನಾಳೆ ನಮ್ಮ ದೇಶದ ಭವಿಷ್ಯವಾಗಿ ಅರಳುತ್ತದೆ. ಮಕ್ಕಳ ಮನಸ್ಸು ಯಾವಾಗಲೂ ದೀಪ ಬೆಳಗಿದ ಹಾಗೆ ಬೆಳಗಲಿ, ಮಕ್ಕಳ ಜೊತೆಗೆ ನಮ್ಮೆಲ್ಲರ ಜೀವನೋತ್ಸಾಹ ಇಮ್ಮಡಿಯಾಗಲಿ ಎಂದು ಶುಭ ಹಾರೈಸಿದರು.
ನಮ್ಮ ದೇಶದ ಮೊದಲ ಪ್ರಧಾನಿ ಜವಾಹರ
ಲಾಲ್ ನೆಹರೂ ರವರ ಜನ್ಮದಿನದ ನೆನಪಿಗಾಗಿ ಆಚರಿಸುವ ಮಕ್ಕಳ ದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಉಮಾ ಇವರು ಮಾತನಾಡಿ ಮಣ್ಣಿನ ಮುದ್ದೆಯಂತಿರುವ ಮಕ್ಕಳನ್ನು ಅಂಗನವಾಡಿಯಲ್ಲಿ ಶಾಲಾ ಪೂರ್ವ ಶಿಕ್ಷಣದ ಮೂಲಕ ಅವರ ಭವಿಷ್ಯ ರೂಪಗೊಳ್ಳುವುದು ಎಂದರು.
ಸಾಣೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಪುಲ್ಕೇರಿ ಅಂಗನವಾಡಿಯಲ್ಲಿ ಅತಿ ಹೆಚ್ಚು ಮಕ್ಕಳ ಸಂಖ್ಯೆಯಿದ್ದು, ವರ್ಷವಿಡಿ ಮಕ್ಕಳ ಮನೋವಿಕಾಸಕ್ಕಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಮುದಾಯದ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳುತ್ತಿರುವುದು ಸಂತಸದಾಯಕ ವಿಚಾರಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹೆದ್ದಾರಿ ವಿಸ್ತರಣೆ ಯಾಗುವಾಗ ಅಂಗನವಾಡಿ ಕೇಂದ್ರದ ನಿವೇಶನ ಮತ್ತು ಕಟ್ಟಡ ಭೂಸ್ವಾಧೀನಗೊಂಡಿದ್ದು,
ಪ್ರಸ್ತುತ ಹತ್ತಿರದಲ್ಲಿರುವ ಹಳೆ ಸರಕಾರಿ ಶಾಲಾ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಈಗಾಗಲೇ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಫುಲ್ಕೇರಿ ಫ್ರೆಂಡ್ಸ್ ಕ್ಲಬ್ ಕಟ್ಟಡದ ಪಕ್ಕದಲ್ಲಿಯೇ ಹೊಸ ಸರಕಾರಿ ನಿವೇಶನ ಮಂಜೂರಾಗಿದ್ದು ಆದಷ್ಟು ಶೀಘ್ರ ಇಲಾಖೆಯ ವತಿಯಿಂದ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ
ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಪಂಚಾಯತ್ ಉಪಾಧ್ಯಕ್ಷರಾದ ಯಶೋಧಾ ಶೆಟ್ಟಿ, ಪಂಚಾಯತ್ ಸದಸ್ಯರಾದ ವಸಂತ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಪ್ರಿಯಾ , ಪ್ರಾಥಮಿಕ ಆರೋಗ್ಯ ಇಲಾಖೆ ಇರ್ವತ್ತೂರು ಇಲ್ಲಿಯ ಆರೋಗ್ಯ ಸಹಾಯಕಿ ಸಂಗೀತಾ, ಸಿಎಚ್ಒ ಸಂಧ್ಯಾ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಅಂಗನವಾಡಿ ಶಿಕ್ಷಕಿ ಸಾಕಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಅಂಗನವಾಡಿಯ ಪುಟಾಣಿ ಮಕ್ಕಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ, ಕಾರ್ತಿಕ ಮಾಸದ ದೀಪೋತ್ಸವದ ಪ್ರಯುಕ್ತ ಮಣ್ಣಿನ ಹಣತೆಗಳನ್ನು ಬೆಳಗಿ ಶಿಶು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು