1:54 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ- ಮಗು ದಾರುಣ ಸಾವು: ಬೆಸ್ಕಾಂ ಎಇ, ಎಇಇ ಅಮಾನತು

19/11/2023, 22:15

ಬೆಂಗಳೂರು(reporterkarnataka.com): ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ಫುಟ್ ಪಾತ್ ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ- ಮಗು ದಾರುಣವಾಗಿ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.
ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ ಎಇ ಮತ್ತು ಎಇ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಯಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು