2:05 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ

21/11/2023, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಯು ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡ ದತ್ತಪೀಠಕ್ಕೆ ಬರಲಿ.
ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ರಾಮ ಇದ್ದಾನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ಎಂದು ಮಾಧ್ಯಮ ಜತೆ ಮಾತನಾಡಿದ ರವಿ ನುಡಿದರು.
ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ನೀವು ಮಾಲೆ ಹಾಕಿದರೆ ಸಚಿವ ಜಮೀರ್ ಅವರು ಕೂಡ ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ನಲ್ಲಿ ಮಾತ್ರ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು ಮುಂದಕ್ಕೆ ನೋಡಬೇಕು ಎಂದು ಸಿ.ಟಿ. ರವಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು