4:18 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

21/11/2023, 18:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಎಲ್ಲ ಕೋಮಿನ ಯಜಮಾನರು, ಮುಖಂಡರು ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ಸಿದ್ದಯ್ಯನ ಹುಂಡಿ ವೃತ್ತದಲ್ಲಿ ನೂತನ ಮದ್ಯದ ಅಂಗಡಿ ತೆರೆಯಲಾಗಿದೆ. ಮಹಿಳೆಯರು ಮಕ್ಕಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ವಾಸಿಸುವ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಅಕ್ಷಮ್ಯ ಅಪರಾಧ. ಇದರಿಂದಾಗಿ ಕಸುವಿನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕುಡಿತದ ಚಟಕ್ಕೆ ಬಲಿಯಾಗಿ ಅಶಾಂತಿ ವಾತಾವರಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಎಲ್ಲಾ ವರ್ಗದ ಜನರು ಅಣ್ಣ-ತಮ್ಮಂದಿರ ರೀತಿಯಲ್ಲಿ ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ.ಇಂತಹ ಸ್ಥಳದಲ್ಲಿ ಮದ್ಯದ ಅಂಗಡಿ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ನಂಜನಗೂಡಿನ ತಾಲೂಕು ಆಡಳಿತ ಎಚ್ಚೆತ್ತು ಪ್ರಾರಂಭವಾಗಿರುವ ಮಧ್ಯದ ಅಂಗಡಿಯನ್ನ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಗ್ರಾಮದ ಗೌಡಿಕೆ ಯಜಮಾನರಾದ ಕೆ.ಎಂ. ಶಿವಮೂರ್ತಿ, ಶಿವಪ್ಪ , ಗ್ರಾಪಂ ಅಧ್ಯಕ್ಷರಾದ ಮಂಜುಳಾ ದೊರೆಸ್ವಾಮಿ, ಮಹದೇವಸ್ವಾಮಿ , ಮಹದೇವ ಸೇರಿದಂತೆ ನೂರಾರು ಮುಖಂಡರು ಸಾರ್ವಜನಿಕರು ಗ್ರಾಮಸ್ಥರು ಸಂಘ ಸಂಸ್ಥೆಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು