2:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನನಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ವಿವೇಚನೆ ಬಿಟ್ಟಿದ್ದು: ಶಾಸಕ ಮಹೇಶ್ ಕಮಟಳ್ಳಿ

02/08/2021, 17:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಬಿಜೆಪಿ 

ಹೈಕಮಾಂಡ್ ಗೆ ಸಂಬಂಧಿಸಿದ ವಿಷಯ ಆಗಿದೆ. ನನಗೆ ಸಚಿವ ನೀಡಬೇಕೆಂದು ಪಕ್ಷದಲ್ಲಿ ಬೇಡಿಕೆ ಇದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.


ನಮ್ಮಪಕ್ಷದ ವರಿಷ್ಠರು, ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆಯೋ ಅದಕ್ಕೆ ತಾನು ಬದ್ಧನಿದ್ದೇನೆ. ನನ್ನನ್ನು ಸಚಿವ ಮಾಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಈಗಾಗಲೇ ಕೃಷ್ಣಾ ನದಿ ತೀರದ 22 ಹಳ್ಳಿಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲಿನ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿ ವ್ಯವಸ್ಥೆ ಮಾಡುವುದಾಗಿ ಅವರು ಭರವಸೆ ನೀಡಿದರು.

ಪ್ರವಾಹದ ಸಂದರ್ಭದಲ್ಲಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳ ಕುರಿತು ಅವಲೋಕಿಸಿದ್ದೇನೆ. ಶೀಘ್ರವಾಗಿ ಸರಕಾರದಿಂದ ಪರಿಹಾರ ಕೊಡಿಸುವುದಾಗಿ ಅವರು ಹೇಳಿದರು 


ಕೃಷ್ಣಾ ನದಿ ಪ್ರವಾಹದಲ್ಲಿ ಜಲಾವೃತವಾದ ಗ್ರಾಮಗಳಿಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಭೇಟಿ ನೀಡಿ ನಿರಾಶ್ರಿತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು