2:26 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಳಿಗೆರೆ ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳ ಸಸ್ಪೆಂಡ್

22/11/2023, 10:53

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗ್ರಾಮದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 12ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿರುತ್ತಾರೆ.
ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳಿದ್ದ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿಯ ಕರ್ತವ್ಯದಲ್ಲಿದ್ದ ಪೇದೆ ಗಳಾದ ನಂಜೇಶ್ ಹಾಗೂ ಪ್ರಸನ್ನಕುಮಾರ್ ರವರದ್ದಾಗಿರುತ್ತದೆ.
ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ. ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಗ್ರಾಮಕ್ಕೆ ಬಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸುಟ್ಟು ಗಾಯಗೊಂಡ ಆತನನ್ನು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.
ಕರ್ತವ್ಯಲೋಪದ ಹಿನ್ನಲೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಅವರು ನೀಡಿದ ವರದಿ ಆಧಾರದ ಮೇಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು