6:05 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಾಡಹಗಲೇ ನಡುಬೀದಿಯಲ್ಲಿ ಪತಿಯಿಂದ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

22/11/2023, 18:16

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಅಮಾನುಷವಾಗಿ ಮಚ್ಚುವಿನಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಚಳ್ಳಕೆರೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಇಲ್ಲಿನ ಬೆಂಗಳೂರು ರಸ್ತೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಈ ಭೀಕರ ಕೃತ್ಯ ನಡೆದಿದೆ. ಚಳ್ಳಕೆರೆಯ ಚೆನ್ನಮ್ಮ ನಾಗತಿಹಳ್ಳಿಯ ಕುಮಾರ್ ಎಂಬ ಯುವಕ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಪ್ರಾಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಗೃಹಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗತಿಹಳ್ಳಿಯ ಕುಮಾರ್ ಎಂಬಾತ 3 ವರ್ಷಗಳ ಹಿಂದೆ ಸಾಣಿಕೆರೆ ಹತ್ತಿರ ಹೆಗ್ಗೆರೆಯ ಯುವತಿಯನ್ನು ವಿವಾಹವಾಗಿದ್ದ. ಈ ನಡುವೆ ಕಳೆದ ಎರಡು ತಿಂಗಳಿನಿಂದ ಗಂಡ- ಹೆಂಡತಿ ನಡುವೆ ಮನಸ್ತಾಪ ಉಂಟಾಗಿತ್ತು. ಈ ವೈಮಸ್ಸು ತೀರಾ ವಿಕೋಪಕ್ಕೆ ಹೋಗಿ ಇವತ್ತು ಪತಿ ಕುಮಾರ್ ತನ್ನ ಹೆಂಡತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆ ನಡೆದ ಬಳಿಕ ಆರೋಪಿಯನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು