6:54 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವಕ ಬಲಿ; 2 ತಿಂಗಳ ಅವಧಿಯಲ್ಲಿ 3ನೇ ಸಾವು; ಅರಣ್ಯ ಇಲಾಖೆ ವಿರುದ್ಧ ಹೆಚ್ಚಿದ ಆಕ್ರೋಶ

22/11/2023, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಸಾವಾಗಿದೆ.
ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ತಿಕ್ ಗೌಡ (26) ಮೃತ ದುರ್ದೈವಿಯಾಗಿದ್ದಾರೆ. ವಿಶೇಷವೆಂದರೆ ಆನೆ ನಿಗ್ರಹ ಪಡೆಯ ಸದಸ್ಯನೇ ಆಗಿರುವ ಕಾರ್ತಿಕ್ ಗೌಡ ಆನೆ ದಾಳಿಗೆ ಬಲಿಯಾಗಿದ್ದಾರೆ.
20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರ್ಕಾರ ರಚಿಸಿ್ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಬೈರಾಪುರದಲ್ಲಿ ಆನೆ ಓಡಿಸುವಾಗ ಆನೆ ದಾಳಿಗೆ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎಂಬವರು ಸಾವನ್ನಪ್ಪಿದ್ದಾರೆ. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎಂಬುವರು ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು