6:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ !

02/08/2021, 21:24

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಕೊರೊನಾ ಪ್ರಕರಣಗಳು 

ವಿಪರೀತ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸೀಲ್ಡೌನ್ ಗೆ ಮುಂದಾಗಿದೆ. ಹೆಚ್ಚು ಪ್ರಕರಣ ಪತ್ತೆ ಆಗಿರುವ ಮನೆಗಳಿಗೆ ಸೀಲ್ ಡೌನ್ ಮಾಡಲಾಗುತ್ತಿದೆ. ಇನ್ನು ಹೈರಿಸ್ಕ್ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ. 

ಅದು ಕೂಡ ಬಿಬಿಎಂಪಿ ಸೂಚಿಸಿದ ಸ್ಥಳದಲ್ಲಿಯೇ ಕ್ವಾರಂಟೈನ್ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಕ್ವಾರಂಟೈನ್ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುವುದು. ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದರಷ್ಟೇ ಮನೆಗೆ ವಾಪಸ್ ಕಳಿಸಲಾಗುತ್ತೆ. ಕೇರಳದಿಂದ ಬರುವವರು ಕೋವಿಡ್ ನೆಗೆಟಿವ್ ವರದಿ ತರಬೇಕು ಎಂದರು.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೊವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು