1:29 AM Wednesday11 - November 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy…

ಇತ್ತೀಚಿನ ಸುದ್ದಿ

ಮೊಬೈಲ್ ನಲ್ಲಿ ಮಾತನಾಡುತ್ತಾ ಮಲಗಿದವರ ಮೇಲೆ ಟಪರ್ ಚಲಾಯಿಸಿದ ಚಾಲಕ: ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

24/11/2023, 20:54

ಹೆಬ್ರಿ(reporterkarnataka.com): ಸೋಮೇಶ್ವರದ ಪೆಟ್ರೋಲ್‌ ಬಂಕಿನಲ್ಲಿ ಮಲಗಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು
ಸಾಗರ ತಾಲೂಕಿನ ಶಿವರಾಜ್(38) ಎಂದು ಗುರುತಿಸಲಾಗಿದೆ. ಮಹೇಂದ್ರ ಎಂಬವರು ಈ ದುರ್ಘಟನೆಯಿಂದ ಗಂಭೀರ ಗಾಯಗೊಂಡಿದ್ದಾರೆ.
ಸಾಗರ ಕಡೆಯಿಂದ ಬಾಳೆಕಾಯಿ ತುಂಬಿಸಿಕೊಂಡು ಬಂದಿದ್ದ ಶಿವರಾಜ್ ಹಾಗೂ ಮಹೇಂದ್ರ ರಾತ್ರಿ ವೇಳೆ ಸೋಮೇಶ್ವರದ ಪೆಟ್ರೋಲ್ ಬಂಕ್ ನಲ್ಲಿ ಟಾಟಾ ಏಸ್ ವಾಹನವನ್ನು ನಿಲ್ಲಿಸಿ ವಾಹನದ ಮುಂದೆ ಮಲಗಿದ್ದರು. ಮುಂಜಾನೆ 6 ಗಂಟೆ ಸುಮಾರಿಗೆ ಟಿಪ್ಪರ್ ಚಾಲಕನೋರ್ವ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಲಗಿದ್ದವರ ಮೇಲೆಯೇ ಚಲಾಯಿಸಿಕೊಂಡು ಹೋದ ಪರಿಣಾಮ ಶಿವರಾಜ್ ಸ್ಥಳದಲ್ಲೇ ಮೃತಪಟ್ಟರೆ, ಮಹೇಂದ್ರ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಟಿಪ್ಪರ್ ಚಾಲಕ ಮೊಬೈಲ್‌ ನಲ್ಲಿ ಮಾತನಾಡಿಕೊಂಡು ಟಿಪ್ಪರ್ ಚಲಾಯಿಸಿರುವುದೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ಭೀಕರ ದೃಶ್ಯ ಪೆಟ್ರೋಲ್ ಬಂಕಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಭೇಟಿ ನೀಡಿದ್ದು,ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು