9:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 1.62 ಕೋಟಿ ಮೌಲ್ಯದ ಸೊತ್ತು ವಶ

25/11/2023, 21:33

ಮಂಗಳೂರು(reporterkarnataka.com): ಕೋಟ್ಯಂತರ ರೂಪಾಯಿ ಬೆಲೆಬಾಳುವ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ನಗರದ ಪಂಪ್ ವೆಲ್ ಬಳಿ
ಶನಿವಾರ ಬಂಧಿಸಲಾಗಿದೆ.


ಬಂಧಿತರನ್ನು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ನಿವಾಸಿಯಾದ ಪ್ಯಾರೇಜಾನ್ ಅಲಿಯಾಸ್ ಸೇಟು(37), ಮಂಗಿಲಪದವು ಸಮೀಪದ ಪಾತಿರತೋಟ ಹೌಸ್ ನಿವಾಸಿಯಾದ ಬದ್ರುದ್ದೀನ್ ಅಲಿಯಾಸ್ ಬದ್ರು (28 ) ಹಾಗೂ ತಮಿಳುನಾಡು ನಾಗಪಟ್ಟಿನಂ ಜಿಲ್ಲೆಯ ರಾಜೇಶ್.ಆರ್.(22) ಎಂದು ಗುರುತಿಸಲಾಗಿದೆ.
ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ. ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು