5:05 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಕನ್ನಡ ಸಾಹಿತ್ಯ ಅಕಾಡೆಮಿ: ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಅರ್ಜಿ ಆಹ್ವಾನ

03/08/2021, 08:49

ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ 2020ನೇ ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. 
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2020ರ ಜನವರಿ 1 ರಿಂದ 2020ರ ದಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 202) ಎಂದು ಮುದ್ರಿತವಾಗಿರಬೇಕು.
ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಕವನ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವ ಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಟಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ, ಕಾದಂಬರಿ (ಅಕಾಡಮಿ ಪುಸ್ತಕ ಬಹುಮಾನ ಹಾಗು ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ (ಹರಣೆ ಮತ್ತು ವಿನೋದ ಸಾಹಿತ್ಯ ಸೇರಿ) (ಆಕಾಡಮಿ ಪುಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ, ಆತ್ಮಕಥೆ (ಅಕಾಡಮಿ ಪುಸ್ತಕ ಬಹುಮಾನ ಉಂಗ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡಮಿ ಮಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದಕ್ಷಿನಿಧಿ ಬಹುಮಾನಗಳಿಗಾಗಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯರು, ಭೂಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶದ್ರ ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷೆ ಶಾಸ್ತ್ರ, ಶಿಕ್ಷಣ, ವಾಣಿಜ್ಯ ಕಾನೂನು, ಗ್ರಂಥ ಭಂಡಾರವಿಜ್ಞಾನ ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕøತಿಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ ಅಂಕಣ ಬರಹ (ಆದಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ (ನ) ಹೈಟರೇಶರ ಕೃತಿಗಳು). (ಉಡಮಿ ಪುಸ್ತಕ ಬಹುಮುಂಜಿ, ಹಂಗ ಎಲ್. ಗುಂಡಪ್ಪ ಮತ್ತು ಶಾರದಮ್ಮ ದಕ್ಷಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೈನಾನೇಪರ ಕೃಷಿ), ಲೇಖಕರ ಮೊದಲ ಸ್ವತಂತ್ರ ಕೃತಿ (2020ರಲ್ಲಿ ಮೊದಲ ಮುದ್ರಣಗೊಂಡ ಸ್ವತಂತ್ರ ಕೃತಿ ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.) (ಉಡಮಿ ಪುಸ್ತಕ ಬಹುವಾರ ಹಾಗೂ ಮಧುರಟೆನ್ನ ದತ್ತಿನಿಧಿ ಬಹುಮಾನಗಳಿಗಾಗಿ)

2)ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ ದಾಸ ಸಾಹಿತ್ಯ (ದಾಸ ಸಾಹಿತ್ಯ ಕುರಿತ ಸೃಜನ/ ಸೃಜನೇತರ ಕೃತಿಗಳು) (ಶ್ರೀಮತಿ
ಶ್ರೀಪತಿ ಆಚಾರ್ಯ ಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು) 
ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: 
ಮರುಮುದ್ರಣವಾದ ಪುಸ್ತಕಗಳು, ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳಾಗಿರಬಾರದು, ಪಠ್ಯಪುಸ್ತಕಗಳಾಗಿರಬಾರದು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳಾಗಿರಬಾರದು. ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳಾಗಿರಬಾರದು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ.
ಒಬ್ಬ ಲೇಖಕರಿಗೆ ಮೂರು ಅವಕಾಶವಿದೆ. ಬಾರಿ, ಬೇರೆ, ಬೇರೆ, ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-56002 ಇವರಿಗೆ ನೋಂದಾಯಿತ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ 2021ರ ಸೆಪ್ಟೆಂಬರ್ 15 ರೊಳಗೆ ತಲುಪಿಸಬೇಕು.  ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ ಕಚೇರಿಯ ದೂ. ಸಂಖ್ಯೆ: 080-22211730 

ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು