2:14 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಸಮೀಪದ ಕಕ್ಕಿಂಜೆ ಬಳಿ ಕಾರಿನ ಮೇಲೆ ಕಾಡಾನೆ ದಾಳಿ: ಕಾರನ್ನೊಮ್ಮೆ ಮೇಲಕ್ಕೆತ್ತಿದ ಸಲಗ; ಭಯಭೀತರಾದ ಗ್ರಾಮಸ್ಥರು

27/11/2023, 22:00

ಬೆಳ್ತಂಗಡಿ(reporterkarnataka.com): ಪಶ್ಚಿಮಘಟ್ಟ ತಪ್ಪಲು ಪ್ರದೇಶದಲ್ಲಿ ಕಾಡಾನೆ ಹಾವಳಿ ಮತ್ತೆ ಶುರುವಾಗಿದೆ. ಕಕ್ಕಿಂಜೆ ಸಮೀಪ ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿ, ದಾಂಧಲೆ ನಡೆಸಿದೆ.
ಕಕ್ಕಿಂಜೆಯ ಬಯಲುಬಸ್ತಿಯಲ್ಲಿ ಸೋಮವಾರ ಕತ್ತಲೆ ಆವರಿಸುತ್ತಿದ್ದಂತೆ ಕಾಡಾನೆಯ ಆಗಮನವಾಗಿದೆ. ಆನೆ ಬರುವುದನ್ನು ಕಂಡು ಚಾಲಕರು ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ಆದರೆ ನೇರವಾಗಿ ಕಾರಿನತ್ತ ಆಗಮಿಸಿದ ಕಾಡಾನೆ ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆನೆ ಬಳಿಕ ಜಾಗ ಖಾಲಿ ಮಾಡಿ ಕಾಡಿನತ್ತ ತೆರಳಿದೆ. ಈ ಘಟನೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಇತ್ತೀಚೆಗೆ ಕಡಬ ಸಮೀಪದ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಹಿಂದೆ ಸುಳ್ಯ ಸಮೀಪದ ಮಂಡೆಕೋಲು ಸುತ್ತ ಮುತ್ತಲಿನ ಪ್ರದೇಶದಲ್ಲಿ ಕಾಡಾನೆ ಉಪಟಳ ತೀವ್ರವಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಲವು ಪ್ರದೇಶಗಳು ಈಗಾಗಲೇ ಕಾಡಾನೆ ಹಾವಳಿಗೆ ತುತ್ತಾಗಿದೆ. 2 ತಿಂಗಳ ಅವಧಿಯಲ್ಲಿ ಇಲ್ಲಿ ಸಲಗ ದಾಳಿಗೆ ಮೂವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು