11:19 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು

28/11/2023, 12:31

ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗೂ ಸೌಜನ್ಯ ಎಂಬುವರು ಕೆಲಸ ಮುಗಿಸಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಯಾರೋ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅವರನ್ನು ತಡೆದು ನೀವು ಹಿಂದೂ- ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಹೊಯ್ಸಳ ವಾಹನ ಬಂದಿದ್ದು, ಅವರನ್ನು
ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು