11:55 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಂಜನಗೂಡು: ಹುಲಿ ಕಾಟ ಜತೆಗೆ ಚಿರತೆ ಹಾವಳಿ ಶುರು; ಜಮೀನುಗಳ ರಸ್ತೆಯಲ್ಲೇ ಚಿರತೆ ಬಿಂದಾಸ್ ಹೆಜ್ಜೆ; ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ

28/11/2023, 22:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಟ ಜತೆಗೆ ಚಿರತೆ ಹಾವಳಿ ಕೂಡ ಕಂಡು ಬಂದಿದೆ. ಇಲ್ಲಿನ ರಾಂಪುರ , ಗೌಡರ ಹುಂಡಿ ಗ್ರಾಮದ ಸುತ್ತಮುತ್ತ ಜಮೀನುಗಳಲ್ಲಿ ಚಿರತೆ ನಿರಾತಂಕವಾಗಿ ನಡೆದಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಗ್ರಾಮದ ಮುಖ್ಯರಸ್ತೆಯಿಂದ ಹಿಡಿದು ಜಮೀನಿನ ಕಾಲುದಾರಿಯಲ್ಲಿ ರಾತ್ರಿ ವೇಳೆ ಚಿರತೆ ನಡೆದು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಗೌಡರಹುಂಡಿ ಗ್ರಾಮದ ಶೃಂಗಾರ್ ಎಂಬುವರ ಜಮೀನಿನ ಬಳಿ ಕಾಣಿಸಿಕೊಂಡ ಚಿರತೆಯನ್ನು ರೈತರೊಬ್ಬರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ನಲ್ಲಿ ಸೆರೆಹಿಡಿದ ದೃಶ್ಯ ಈಗ ವೈರಲ್ ಆಗಿದೆ.


ನಂಜನಗೂಡಿನಲ್ಲಿ ಒಂದೆಡೆ ಹುಲಿ ಹಾವಳಿ ಇದ್ದರೆ ಮತ್ತೊಂದೆಡೆ ಚಿರತೆ ಹಾವಳಿ ಕಾಡುತ್ತಿದೆ. ಅರಣ್ಯಪ್ರದೇಶ ಇಲ್ಲದಿದ್ದರೂ ಗ್ರಾಮಗಳು ಹಾಗು ರೈತರ ಜಮೀನುಗಳಲ್ಲಿ ಇಂತಹ ವ್ಯಾಘ್ರಗಳು ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು