5:17 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕರ್ನಾಟಕ- ಕೇರಳ ಗಡಿಭಾಗದ ಎಲ್ಲ ಮದ್ಯದಂಗಡಿ  ಆ.15ರ ವರೆಗೆ ಬಂದ್ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

03/08/2021, 18:53

ಮಂಗಳೂರು (reporterkarnataka.com): ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಈ ನಡುವೆ ಗಡಿ ಪ್ರದೇಶದ ಎಲ್ಲ ಮದ್ಯದಂಗಡಿ ಮುಚ್ಚಲು ಆದೇಶ ನೀಡಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇರುತ್ತದೆ. 

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಯವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ಕಾಯ್ದೆ 1965 ನಿಯಮ 21(1) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು 2021ರ ಆಗಸ್ಟ್ 3 ರಿಂದ 15 ರವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. 
ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್‍ಶಾಪ್ ಅಥವಾ ಬಾರ್‍ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು