5:29 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ

29/11/2023, 11:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು.
ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಈ ಭಾಗದ ಹೋರಾಟಗಾರರು ಪ್ರತಿಟನೆ, ಧರಣಿ, ಸತ್ಯಾಗ್ರಹ, ಬಂದ್ ಗಳನ್ನು ಮಾಡುತ್ತಲೇ ಬಂದಿದ್ದರೂ ಕೂಡ ಇದುವರೆಗೂ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುತ್ತಿಲ್ಲ. ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಕೆಲ ಕಾಲ ಬಸವೇಶ್ವರ ವೃತ್ತದಲ್ಲಿ ನಿಂತು ಘೋಷಣೆ ಕೂಗಿ ಮಿನಿ ವಿಧಾನಸೌಧಕ್ಕೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಇದಕ್ಕೂ ಮೊದಲು ಪ್ರತಿಭಟನಾಕಾರರನ್ನು ಉದ್ದೇಶಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜೀವ ಬಡಿಗೇರ ಮಾತನಾಡಿ, ಈ ಹಿಂದೆ ಹಲವು ಭಾರಿ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಹೋರಾಟ ಮಾಡಿ ಮನವಿ ಸಲ್ಲಿಸಲಾಗಿದೆ. ಆದ್ರೆ ಈ ಭಾಗದ ಜನಪ್ರತಿನಿಧಿಗಳು ಖ್ಯಾರೆ ಎನ್ನುತ್ತಿಲ್ಲ. ಈ ಭಾಗದ ಜನರ ತೊಂದರೆ ಹೇಳತೀರದ್ದಾಗಿದೆ. ಜಿಲ್ಲೆಯನ್ನಾಗಿ ಘೋಷಣೆ ಮಾಡದೇ ಹೋದಲ್ಲಿ ಮತ್ತೇ ಹೋರಾಟ ಸಮಿತಿಯು ಧರಣಿ, ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಮುಖಂಡ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ” ಈಗಾಗಲೇ ಬಿಜೆಪಿ, ಕಾಂಗ್ರೇಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಈ ಭಾಗದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದಾಗ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವುದಾಗಿ ಹೇಳುತ್ತಲೇ ಬಂದಿದ್ದು, ಎರಡೂವರೆ ದಶಕಗಳಿಂದಲೂ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಹೋರಾಟ ಮಾಡುತ್ತಲೇ ಬಂದಿದ್ದು, ಈಗಲೂ ಕೂಡ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದರು.
ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಜಯ ಪಾಟೀಲ, ಸಂತೋಷ ಪೂಜೇರಿ, ಪ್ರತಾಪ ಪಾಟೀಲ, ಬಸವರಾಜ ಸಾಜನೆ, ಅಮೂಲ ನಾವಿ, ವಿಜಯ ಬ್ಯಾಳೆ, ಕುಮಾರ ಪಾಟೀಲ, ಸತ್ಯಪ್ಪ ಕಾಂಬಳೆ, ರಮೇಶ ಢಂಗೇರ, ಭೀಮು ನಾಯಕ, ಶ್ರೀಕಾಂತ ಅಸೋದೆ, ರವಿ ನಾಯ್ಕ, ರಫೀಕ ಪಠಾಣ, ಕುಮಾರ ಗುರವ, ಪರಶು ಗಾವಡೆ, ಸಚಿನ ದೊಡಮನಿ, ಕಾನಪ್ಪ ಪಾಡಕರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು