ಇತ್ತೀಚಿನ ಸುದ್ದಿ
ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ
29/11/2023, 22:49
ಪುತ್ತೂರು(reporterkarnataka.com): ಹಾಸನದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ಸಮೀಪದ ನಿವಾಸಿ 23ರ ಹರೆಯದ ಸಂಶುದ್ದೀನ್ ಅಸ್ಗರ್ ಅಲಿ ಎಂದು ಗುರುತಿಸಲಾಗಿದೆ.
ಮಹಿಳೆ ಬಸ್ ನಿಲ್ದಾಣದಲ್ಲಿದ್ದ ವೇಳೆ ಮದ್ಯ ಸೇವಿಸಲು ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹಾಸನ ತಾಲೂಕು ಚೆನ್ನರಾಯಪಟ್ಟಣ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ನ 24 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯ ಕುಡಿಯಲು
ನೀಡಿ ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಸಂಶುದ್ದೀನ್ ಅಸ್ಗರ್ ಅಲಿಯನ್ನು ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ.