3:17 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು