8:27 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ನಂಜನಗೂಡು: ಜಮೀನು ವಿವಾದ ಕೊಲೆಯಲ್ಲಿ ಅಂತ್ಯ; ಅಣ್ಣನ ಮಗನಿಂದ ಸ್ವಂತ ಚಿಕ್ಕಪ್ಪನ ಭೀಕರ ಹತ್ಯೆ

30/11/2023, 15:03

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಜಮೀನಿನ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣನ‌ ಮಗನೇ ಚಿಕ್ಕಪ್ಪನನ್ನ ಕೊಂದಿರುವ ಘಟನೆ
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಲೆಗೈದ ಆರೋಪಿ. ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮಚ್ಚಿನಿಂದ ಹಲ್ಲೆ ನಡೆಸಿದ. ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ. ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯ ಪಿ ಎಸ್ ಐ ಕೃಷ್ಣ ಕಾಂತ್ ಕೋಳಿ ಎ ಎಸ್ ಐ ಲಿಂಗದೇವರು ನಾಗು ಗಣೇಶ್ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು. ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು