1:16 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ನಂಜನಗೂಡು: ಕನಕ ಜಯಂತಿ ಆಚರಣೆ; ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ

30/11/2023, 17:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರೀ ಭಕ್ತ ಕನಕದಾಸರ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು
ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ತಹಸಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ತಾಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಶಾಸಕರಾದ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಹಾಲಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಶ್ರೀ ಭಕ್ತ ಕನಕದಾಸರು ಶತಮಾನಗಳ ಹಿಂದೆ ಭಾವೈಕ್ಯತೆಯನ್ನು ಸಾರಿದ ಮಹಾನುಭಾವರು. ಕುಲ ಕುಲ ಕುಲವೆಂದು ಹೊಡೆದಾಡುವಿರ ಕುಲದ ನೆಲವ ನೀವು ಬಲ್ಲಿರಾ ಬಲ್ಲಿರಾ ಎಂಬ ವೇದ ವಾಕ್ಯವನ್ನು ಸೃಷ್ಟಿಸಿ ಇಡೀ ದೇಶಕ್ಕೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶ ಸಾರಿ ಸಮಾಜದ ಉತ್ತಮ ಬೆಳವಣಿಗೆ ಮಾದರಿಯಾದವರು. ಶ್ರೀ ಭಕ್ತ ಕನಕದಾಸರು ಧಾರ್ಮಿಕತೆಯ ಆಚಾರ ವಿಚಾರ ಸಂಪ್ರದಾಯವನ್ನು ಉತ್ತುಂಗಕ್ಕೆ ಏರಿಸುವುದರಲ್ಲಿ ಕನಕದಾಸರ ಪಾತ್ರ ಬಹಳ ಪ್ರಮುಖವಾದದ್ದು. ಕನಕದಾಸರ ಸಿದ್ಧಾಂತವನ್ನು ರೂಢಿಸಿಕೊಂಡು ಸಮಾಜದಲ್ಲಿ ಶಾಂತಿ ಸಹ ಬಾಳ್ವೆಯ ಸಮಾನತೆಯ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದರು.
ಶ್ರೀ ಭಕ್ತ ಕನಕದಾಸರು ಯಾವುದೇ ಒಂದು ವರ್ಗಕ್ಕೆ ಸೀಮಿತವಾದವರಲ್ಲ, ದೇಶ ಮತ್ತು ರಾಜ್ಯದಲ್ಲಿ ಎಲ್ಲಾ ಸಂತರು ಒಂದಲ್ಲ ಒಂದು ರೀತಿಯಲ್ಲಿ ಉತ್ತಮ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ. ಅವರನ್ನು ಸ್ಮರಿಸಿಕೊಂಡು ಅವರ ಸಿದ್ಧಾಂತವನ್ನು ರೂಢಿಸಿಕೊಂಡು ಯುವ ಪೀಳಿಗೆಗೆ ಮಾದರಿಯಾಗುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿರುತ್ತದೆ. ಶ್ರೀ ಭಕ್ತ ಕನಕದಾಸರ ವೇದ ವಾಕ್ಯಗಳು ಇನ್ನು ನೂರು ವರ್ಷ ಕಳೆದರೂ ಸಹ ಸಮಾಜದಲ್ಲಿ ಅಚ್ಚಳಿಯದಂತೆ ರಾರಾಜಿಸುತ್ತವೆ. ಕನಕದಾಸರ ವೇದ ವಾಕ್ಯಗಳನ್ನು ಜೀವನದಲ್ಲಿ ರೂಢಿಸಿಕೊಂಡು ಶಾಂತಿ ಸಹಬಾಳ್ವೆಯಿಂದ ಬದುಕು ಸಾಗಿಸಬೇಕು ಎಂದು ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಶಿವಕುಮಾರ್, ಇಒ ಜೆರಾಲ್ಡ್ ರಾಜೇಶ್, ವಿವಿಧ ಸಂಘಟನೆಗಳ ಮುಖಂಡರು, ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು