9:15 AM Friday1 - August 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಅವರಿಂದ ಆಟೋ ಚಾಲಕರಿಗೆ ಜಾಗೃತಿ, ದಂಡದ ಎಚ್ಚರಿಕೆ

30/11/2023, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್, ಕೊಟ್ಟಿಗೆಹಾರದಲ್ಲಿ ಆಟೋ ಚಾಲಕರ ವಾಹನ ದಾಖಲೆ ಪರಿಶೀಲನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‍, ಕೊಟ್ಟಿಗೆಹಾರದಲ್ಲಿ ಆಟೋ ವಾಹನ ಚಾಲಕರ ವಾಹನ ದಾಖಲೆಗಳನ್ನು ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಪರಿಶೀಲನೆ ಮಾಡಿದರು.


ನಂತರ ಕೊಟ್ಟಿಗೆಹಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಣಕಲ್, ಕೊಟ್ಟಿಗೆಹಾರದಲ್ಲಿ ಅನೇಕ ಆಟೋಗಳಿವೆ. ಆದರೆ ಕೆಲವು ಆಟೋಗಳಿಗೆ ಯಾವುದೇ ದಾಖಲೆಗಳಿಲ್ಲ. ಕಳೆದ ಕೆಲವು ದಿನಗಳ ಹಿಂದೆ ಆಟೋವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಆದರೆ ಡಿಕ್ಕಿ ಹೊಡೆದ ಆಟೋದಲ್ಲಿ ದಾಖಲೆಗಳು ಸರಿಯಿಲ್ಲದೇ ಮೃತ ವ್ಯಕ್ತಿಗೆ ಪರಿಹಾರವೇ ಸಿಗದೇ ಕುಟುಂಬ ಪರದಾಡುವಂತಾಗಿದೆ. ಅದಕ್ಕಾಗಿ ಬಣಕಲ್, ಕೊಟ್ಟಿಗೆಹಾರದಲ್ಲಿ ಎಲ್ಲಾ ಆಟೋಗಳ ವಾಹನ ಚಾಲಕರ ಪರವಾನಗಿ, ಎಫ್ ಸಿ, ಹೊಗೆ ತಪಾಸಣೆ, ಮತ್ತಿತರ ವಾಹನ ದಾಖಲೆ ಪರಿಶೀಲಿಸಲಾಗಿದೆ. ಯಾರ ವಾಹನಗಳ ದಾಖಲೆಗಳು ಸರಿಯಿಲ್ಲ ಅವರು ಕೂಡಲೇ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಲು ಸೂಚಿಸಲಾಗಿದೆ. ಸೂಚನೆ ಕೊಟ್ಟ ನಂತರವೂ ಕೂಡ ದಾಖಲೆಗಳನ್ನು ನವೀಕರಿಸಿ ಇಡದಿದ್ದರೆ ಅಂಥವರ ವಾಹನಗಳನ್ನು ವಶಕ್ಕೆ ಪಡೆದು ದಂಡ ಹಾಕಲಾಗುವುದು ಎಂದು ಎಚ್ಚರಿಸಿದರು.
ಬರೀ ದಾಖಲೆ ಮಾತ್ರವಲ್ಲದೇ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಆಟೋ ಮಾತ್ರವಲ್ಲ ಇತರ ವಾಹನಗಳ ಚಾಲಕರು ಕೂಡ ಸಂಚಾರಿ ನಿಯಮ ಪಾಲಿಸಿ ವಾಹನಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಎಂದು ಆಟೋ ವಾಹನ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು