1:28 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಕ್ಕಳ, ಶಿಕ್ಷಕರ ಸ್ಥಳಾಂತರ; ಬಾಂಬ್ ಗಾಗಿ ಶೋಧ

01/12/2023, 11:43

ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿಯ ಹಲವು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿ ಗಳಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆ ಶಾಲೆಗಳಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಸಿದ್ದಾರೆ.
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಪೋಷಕರು ಶಾಲೆಯತ್ತ ಧಾವಿಸುತ್ತಿದ್ದು, ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.


ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. 15 ಶಾಲೆಗಳ ಪೈಕಿ 13 ಶಾಲೆಗಳಿಂದ ಮಕ್ಕಳನ್ನು ತೆರವು ಮಾಡಿಸಲಾಗಿದೆ.
ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಶುಕ್ರವಾರ ಅನಾಮಧೇಯ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಉದ್ದೇಶಿತ ಶಾಲೆಗಳಲ್ಲಿ ಒಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದ ಎದುರುಗಡೆ ಇದೆ.
ಸಿಲಿಕಾನ್ ಸಿಟಿಯ ಬಸವೇಶ್ವರ ನಗರದ ನೇಪೆಲ್ ಮತ್ತು ವಿದ್ಯಾಶಿಲ್ಪಾ ಸೇರಿದಂತೆ 7 ಶಾಲೆಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಲಾಗಿದೆ. ಸ್ವಲ್ಪ ಸಮಯದ ನಂತರ, ಇನ್ನೂ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಇಮೇಲ್ ಮೂಲಕ ಇದೇ ರೀತಿಯ ಬೆದರಿಕೆ ಹಾಕಲಾಗಿದೆ.
ಹುಸಿ ಬಾಂಬ್ ಬೆದರಿಕೆಯಾಗಿದ್ದರೂ ಬೆಂಗಳೂರು ಪೊಲೀಸರು ಸುರಕ್ಷತಾ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆಗಳಿಂದ ತೆರವುಗೊಳಿಸಿದ್ದಾರೆ.
ಪೊಲೀಸರು ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಶಾಲಾ
ಆವರಣಗಳಲ್ಲಿ ಸಂಪೂರ್ಣ ಶೋಧ ನಡೆಸುತ್ತಿದ್ದಾರೆ. ಯಾವುದೇ ಶಾಲೆಗಳಲ್ಲಿ ಬಾಂಬ್‌ಗಳ ಪತ್ತೆಯಾಗಿರುವ ಕುರಿತು ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು