5:41 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು