ಇತ್ತೀಚಿನ ಸುದ್ದಿ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ
01/12/2023, 20:22
ಬಂಟ್ವಾಳ( reporterkarnataka.com): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಡಿಸೆಂಬರ್ 9ರಂದು ಕಲ್ಲಡ್ಕಕ್ಕೆ ಆಗಮಿಸಲಿದ್ದು, ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಅಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ, ಮಾಜಿ ಸಚಿವರಾದ ಕೃಷ್ಣ ಪಾಲೆಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಸುನಿಲ್ ಕುಮಾರ್, ಶಾಸಕರಾದ ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಡಾ. ಭರತ್ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ.