1:29 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ವಕೀಲರ ಮೇಲೆ ಹಲ್ಲೆ; ಸಬ್ ಇನ್ಸ್‌ಪೆಕ್ಟರ್ ಸಹಿತ 6 ಮಂದಿ ಪೊಲೀಸರ ಅಮಾನತು

01/12/2023, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಲ್ಮೆಟ್ ಹಾಕಿಲ್ಲ ಎಂದು ಚಿಕ್ಕಮಗಳೂರು ನಗರ ಪೊಲೀಸರು ವಕೀಲರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪದಡಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಅವರು ನಗರ ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಿದ್ದಾರೆ.
ಓರ್ವ ಪಿಎಸ್‍ಐ, ಓರ್ವ ಎ.ಎಸ್.ಐ. ಓರ್ವ ಹೆಡ್ ಕಾನ್ಸಟೇಬಲ್ ಸೇರಿದಂತೆ ಮೂವರು ಪೇದೆಗಳನ್ನ ಅಮಾನತು ಮಾಡಿದ್ದಾರೆ. ಗುರುವಾರ ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬೈಕಿನ ಕೀ ಏಕೆ ತೆಗೆಯುತ್ತೀರಾ ಎಂದು ಪ್ರಶ್ನಿಸಿದ ವಕೀಲ ದಂಡ ಕಟ್ಟುತ್ತೇನೆ ಎಂದು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಠಾಣೆ ಎದುರೇ ಘಟನೆ ನಡೆದಿದ್ದರಿಂದ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆಂದು ವಕೀಲರ ಸಂಘ ಆರೋಪಿಸಿದೆ. ವಕೀಲ ಪ್ರೀತಂ ಎದೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಹೋಗಿ ಆತನನ್ನ ನೋಡಿಕೊಂಡು ಠಾಣೆಗೆ ಬಂದ ವಕೀಲರ ಸಂಘ ಇಡೀ ರಾತ್ರಿ ಪೊಲೀಸ್ ಠಾಣೆ ಮುಂದೆ ಬೀಡುಬಿಟ್ಟಿತ್ತು. ಅವರನ್ನ ಅರೆಸ್ಟ್ ಮಾಡಿ ಎಂದು ಆಗ್ರಹಿಸಿತ್ತು. ಆದರೆ, ಪೊಲೀಸರು ವಿಚಾರಣೆಗೊಳಪಡಿಸುತ್ತೇವೆ ಎಂದಾಗ ವಕೀಲರು ವಿಚಾರಣೆ ಬೇಡ ಕೇಸ್ ದಾಖಲಿಸಿ ಎಂದು ಬಂಧಿಸಿ ಎಂದು ಆಗ್ರಹಿಸಿದ್ದರು. ಪ್ರೀತಂ ಮೇಲೆ ಹಲ್ಲೆ ಮಾಡಿದ ಪೇದೆಯನ್ನ ಆಸ್ಪತ್ರೆಯಲ್ಲಿ ರಿಪೋರ್ಟ್ ತೆಗೆದುಕೊಳ್ಳು ಕಳಿಸಿದ್ದಾರೆ. ಇದು ವಕೀಲರ ಆಕ್ರೋಶಕ್ಕೆ ಕಾರಣವಾಗಿತ್ತು. 307 ಕೇಸ್ ದಾಖಲಾಗಿದೆ. ಆರೋಪಿಗಳು ಠಾಣೆಯ ಒಳಗೆ ಇದ್ದಾರೆ, ಬಂಧಿಸಿ ಎಂದು ಪಟ್ಟು ಹಿಡಿದಿದ್ದರು. ಸುಮಾರು ಆರು ಗಂಟೆಗಳ ವಕೀಲರ ಹೋರಾಟದ ಫಲವಾಗಿ ಎಸ್ಪಿ 6 ಮಂದಿ ಪೊಲೀಸರನ್ನ ಅಮಾನತು ಮಾಡಿ ವಿಚಾರಣೆಗೆ ಡಿ.ವೈ.ಎಸ್.ಪಿ. ನೇತೃತ್ವದ ತಂಡ ರಚಿಸಿದ್ದಾರೆ. ಆದರೆ, ವಕೀಲರ ಸಂಘ ಆರು ಜನರನ್ನ ಅಮಾನತು ಮಾಡಿ ಆದೇಶಿಸಿದ್ದಾರೆ. ಆರು ಜನ ಅರೆಸ್ಟ್ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿರೋ ವಕೀಲರ ಸಂಘ ಹೋರಾಟವನ್ನ ಮುಂದುವರೆಸಲು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು