8:05 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್

02/12/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಮಾನತಿಗೊಳಗಾದ 6 ಮಂದಿ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಶನಿವಾರ ಚಿಕ್ಕಮಗಳೂರು ನಗರದ ಟೌನ್ ಠಾಣೆ ಬಳಿ ಧರಣಿ ನಡೆಸಿದರು.
6 ಮಂದಿ ಪೊಲೀಸರ ವಿರುದ್ದ ಐಪಿಸಿ 307 ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ಓರ್ವ ಪಿಎಸ್ ಐ, ಓರ್ವ ಎಎಸ್ಐ, ಓರ್ವ ಎಚ್.ಸಿ, ಮೂವರು ಪೇದೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
6 ಮಂದಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿ
ವಕೀಲರ ಸಂಘ ಪ್ರತಿಭಟನೆ ನಡೆಸಿತ್ತು.
ಇಂದು ಅಮಾನತಿಗೊಳಗಾದ ಪೊಲೀಸರ ಕುಟುಂಬದಿಂದ ಸ್ಟೇಷನ್ ಮುಂಭಾಗ ಧರಣಿ ನಡೆಯಿತು. ಆಮಾನತ್ತುಗೊಳಿಸಿದ ಬಗ್ಗೆ ಪೊಲೀಸರ ಕುಟುಂಬಸ್ಥರು ಅಸಮಾಧಾನ ಹೊರಹಾಕಿದರು.
ಹಿರಿಯ ಅಧಿಕಾರಿಗಳಿಂದ ಬೆಂಬಲ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿದ್ದಾರೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದ್ದು, 6 ಮಂದಿ ಪೊಲೀಸರ ಅಮಾನತ್ತು ಮಾಡಿ ಎಸ್ಪಿ ವಿಕ್ರಮ ಅಮಟೆ ಆದೇಶ ಹೊರಡಿಸಿದ್ದರು.
ಪೊಲೀಸರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಹೈಕೋರ್ಟ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿತ್ತು. ಮಂಗಳವಾರದ ಒಳಗೆ ವರದಿ ಹಾಗೂ ಕ್ರಮದ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು