11:44 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

Olympics | ಭಾರತೀಯ ಕುಸ್ತಿಪಟುಗಳ ಅಮೋಘ ಪ್ರದರ್ಶನ, ಪದಕದಾಸೆ ಮೂಡಿಸಿದ ರವಿ, ದೀಪಕ್

04/08/2021, 11:20

ReporterKarnataka.com

ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಿಂದ ಭಾರತೀಯ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.

ಭಾರತದ ಸ್ಟಾರ್ ಕುಸ್ತಿಪಟುಗಳಾದ ದೀಪಕ್‌ ಪುನಿಯಾ ಹಾಗೂ ರವಿ ಕುಮಾರ್ ದಹಿಯಾ ತಮ್ಮ ವಿಭಾಗಗಳಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದು, ಇನ್ನೊಂದು ಪಂದ್ಯ ಜಯಿಸಿದರೆ ಒಲಿಂಪಿಕ್ಸ್‌ ಪದಕಕ್ಕೆ ಕೊರಳೊಡ್ದಲಿದ್ದಾರೆ.

ಪುರುಷರ 57 ಕೆ.ಜಿ. ವಿಭಾಗದ ಫ್ರೀ ಸ್ಟ್ರೈಲ್‌ ಕುಸ್ತಿ ಸ್ಪರ್ಧೆಯಲ್ಲಿ ಕೊಲಂಬಿಯಾ ಆಟಗಾರನ ಎದುರು ಭರ್ಜರಿ ಗೆಲುವು ಸಾಧಿಸಿ ಕ್ವಾರ್ಟರ್‌ ಪ್ರವೇಶಿಸಿದ್ದ ರವಿ ಕುಮಾರ್ ದಹಿಯಾ, ಬಲ್ಗೇರಿಯಾದ ಜಾರ್ಜಿ ವೆಂಗೆಲ್ವೊ ಎದುರು ಮತ್ತೊಮ್ಮೆ ಟೆಕ್ನಿಕಲ್ ಸೂಪಿರಿಯಾರಿಟಿ ಮೆರೆಯುವ ಮೂಲಕ 14-4 ಅಂಕಗಳ ಅಂತರದಲ್ಲಿ ಜಯ ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಆರಂಭದಲ್ಲಿ ಸಾಕಷ್ಟು ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ರವಿ ಕುಮಾರ್ ಮೊದಲ ಸುತ್ತಿನಲ್ಲೇ 4-0 ಮುನ್ನಡೆ ಕಾಯ್ದುಕೊಂಡಿದ್ದರು, ಇದಾದ ಬಳಿಕವೂ ಪ್ರಾಬಲ್ಯ ಮೆರೆದ ರವಿ 14-4 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿ ಸೆಮೀಸ್‌ ಪ್ರವೇಶಿಸಿದ್ದಾರೆ.

ಪುರುಷರ 86 ಕೆ.ಜಿ. ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಕುಸ್ತಿಪಟು ದೀಪಕ್‌ ಪುನಿಯಾ, ಚೀನಾದ ಲಿನ್ ಜುಸೇನ್ ಎದುರು 6-3 ಅಂಕಗಳ ಅಂತರದಲ್ಲಿ ರೋಚಕ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಕೊನೆಯ ಕ್ಷಣದವರೆಗೂ 3-3 ಅಂಕಗಳ ಸಮಬಲ ಸಾಧಿಸಿದ್ದ ಉಭಯ ಆಟಗಾರರ ನಡುವೆ ಸಾಕಷ್ಟು ಪೈಪೋಟಿ ಕಂಡು ಬಂದಿತು. ಆದರೆ ಕೊನೆಯ ಕೆಲ ಸೆಕೆಂಡ್‌ಗಳು ಬಾಕಿ ಇರುವಾಗ ತನ್ನೆಲ್ಲಾ ಅನುಭವಗಳನ್ನು ಬಳಸಿಕೊಂಡ ದೀಪಕ್ 6-3 ಅಂಕಗಳ ಮುನ್ನಡೆ ಸಾಧಿಸುವುದರೊಂದಿಗೆ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು