ಇತ್ತೀಚಿನ ಸುದ್ದಿ
ದ.ಕ. ಲೋಕಸಭೆ ಕ್ಷೇತ್ರ: ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಮಹತ್ವದ ಸಭೆ; ಅಭಿಪ್ರಾಯ ಆಲಿಸಿದ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ
03/12/2023, 00:24
ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭೆ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿದರು.











ಪಕ್ಷದ ಸ್ಥಳೀಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು.ಮಾಜಿ ಸಂಸದ ಬಿ. ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್. , ಜಿ. ಎ. ಭಾವ, ಮಾಜಿ ಸಚಿವ ಅಭಯಚಂದ್ರ ಜೈನ್, ಡಿಸಿಸಿ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಮಮತಾ ಗಟ್ಟಿ, ಜಿ ಕೃಷ್ಣಪ್ಪ, ಕಣಚೂರು ಮೋನು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಸರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.














