9:31 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು

03/12/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ನಿನ್ನೆ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲಿಯೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡು ಬಂದಿದೆ.
ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ.
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು