5:48 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ

04/08/2021, 12:55

ಬೆಂಗಳೂರು(ReporterKarnataka.com)

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿಯಲ್ಲಿ
ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್ ಅಂಗಾರ, ಆನಂದ್ ಸಿಂಗ್, ಸಿ ಸಿ‌ ಪಾಟೀಲ್, ಬಿ.ಸಿ. ನಾಗೇಶ್ ಇದ್ದಾರೆ.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು