6:52 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ

04/12/2023, 10:47

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿವಿಧ ಹೂಗಳಿಂದ ಅಲಂಕಾರ ಮಾಡಿ, ಐದು ದಿನಗಳ ಕಾಲ ಗ್ರಾಮದ ಹೆಣ್ಣು ಮಕ್ಕಳು ಸೀರೆಯನ್ನು ಹುಟ್ಟು ಅಲಂಕಾರಗೊಂಡು ಗೌರಮ್ಮನಿಗೆ ಆರತಿ ಹಿಡಿದು ವಿವಿಧ ರೀತಿಯ ಪೂಜೆಗಳನ್ನು ಸಲ್ಲಿಸುತ್ತಾರೆ.
ಗೌರಿಗೆ ಪ್ರತಿದಿನ ಹಳ್ಳಿಯ ಸೊಗಡಿನ ಜನಪದ ಗೀತೆ, ಕೋಲಾಟ, ಭಜನೆ ಕಾರ್ಯಕ್ರಮವನ್ನು ಪ್ರತಿದಿನ ಹಮ್ಮಿಕೊಂಡು ಗೌರಿ ಹಬ್ಬವನ್ನು ಆಚರಿಸುತ್ತಾರೆ.
ಗ್ರಾಮದಲ್ಲಿ ಗೌರಿ ಹಬ್ಬವನ್ನು 55 ವರ್ಷಗಳಿಂದ ಆಚರಿಸುತಿದ್ದೇವೆ, ನಮಗೆ ಸಮೃದ್ಧಿ ಮಳೆ ಆಗಲಿ ಮಳೆ ಆಗದೆ ಇರಲಿ ಯಾವ ವರ್ಷವೂ ಹಬ್ಬವನ್ನು ಕೈ ಬಿಡದೆ ಹಿಂದಿನಿಂದಲೂ ಆಚರಿಸಿಕೊಳ್ಳುತ್ತಾ ಬಂದಿದ್ದೇವೆ.
ಗೌರಿಯನ್ನು ವಿಸರ್ಜನೆ ಮಾಡುವ ಕೊನೆಯ ದಿನ, ಕೀಲು ಕುದುರೆ, ನಂದಿಕೋಲು, ಡೋಲು ಕುಣಿತ, ವೀರಗಾಸೆ, ನೃತ್ಯ ಪ್ರದರ್ಶನ ಹೀಗೆ ವಿವಿಧ ರೀತಿಯ ಕಲಾತಂಡಗಳನ್ನು ಪ್ರತಿ ವರ್ಷವೂ ಕರೆತಂದು ಗೌರಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ವರ್ಷದಿಂದ ವರ್ಷ ಯಶಸ್ವಿಗೊಳಿಸಿಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹೇಳುತ್ತಾರೆ

ಇತ್ತೀಚಿನ ಸುದ್ದಿ

ಜಾಹೀರಾತು