10:46 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು

04/12/2023, 20:26

ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ.
ಹಾಸನದ ಸಕಲೇಶಪುರ ಸಮೀಪದ ಯಸಳೂರು ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ರೇಡಿಯೋ ಕಾಲರ್ ಅಳವಡಿಸು ಪ್ರಕ್ರಿಯೆ ನಡೆಯ ಬೇಕಿತ್ತು. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ನಡೆಸಿತ್ತು. ಕಾಡಾನೆ ದಾಳಿಗೆ ಹೆದರಿ ಉಳಿದ ಎರಡು ಸಾಕಾನೆಗಳು ಪಲಾಯನ ಮಾಡಿತ್ತು. ಆದರೆ 65ರ ಹರೆಯದ ಅರ್ಜುನ ನೇರ ಕದನಕ್ಕೆ ಇಳಿದಿದ್ದ. ಮಾವುತನಿಗೂ ಅರ್ಜುನನ ನಿಯಂತ್ರಣ ಮಾಡಲು ಸಾಧ್ಯವಾಗದೆ ಆತ ಆನೆ ಮೇಲಿನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದ. ಭೀಕರ ಕಾಳಗದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಪಕ್ಕೆಯ ಭಾಗಕ್ಕೆ ತಿವಿದಿತ್ತು. ಇದರಿಂದ ಗಂಭೀರ ಗಾಯಗೊಂಡ ಅರ್ಜುನ ನೆಲಕ್ಕೆ ಕುಸಿದು ಕೊನೆಯುಸಿರೆಳೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು