6:32 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು

05/12/2023, 19:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕಮಲಾಕ್ಷಿ ಹಾಗೂ ಉಪಾಧ್ಯಕ್ಷೆ ಪುಷ್ಪ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಕ್ರಮ ಹಾಲಿನ ಪುಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಲ್ಲಿ ಗ್ರಾಮದ ನಾಗಮ್ಮ, ಶಿವಮ್ಮ, ಹಾಗೂ ಸುಮಾ ಎಂಬ ಅಂಗನವಾಡಿ ಕಾರ್ಯಕರ್ತೆಯರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇವರ ಮೇಲೆ ಬಂದ ಆರೋಪ ನಿಜವೋ ಸುಳ್ಳು ಎಂದು ತಿಳಿಯಲು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಇದು ಸುಳ್ಳು ಆರೋಪ ಎಂದು ಗೊತ್ತಾದ ಮೇಲೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನೊಂದ ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಂತು ನಮ್ಮ ಸಂಘಟನೆಯು ಅವರಿಗೆ ಮತ್ತೆ ಕೆಲಸಕ್ಕೆ ಮರು ನೇಮಕ ಮಾಡಲಾಯಿತು.

ಇವರ ನೇಮಕವನ್ನು ಸಹಿಸದ ಕೆಲವರು ಅಧಿಕಾರಿಗಳಿಗೆ ಹಣ ನೀಡಿ ನೇಮಕ ಮಾಡಿಕೊಂಡಿದ್ದಾರೆ ಎಂದು ನಮ್ಮ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಷಯ ವಾಗಿದೆ ಎಂದರು.
ಜೀವನ ನಡೆಸುವುದೇ ಕಷ್ಟದ ಪರಿಸ್ಥಿತಿಯಲ್ಲಿರುವ ಸಂತ್ರಸ್ತರು ಹಣ ಎಲ್ಲಿಂದ ನೀಡುತ್ತಾರೆ ಎಂದು ಪ್ರಶ್ನಿಸಿದರು.
ನಮ್ಮ ಸಂಘಟನೆಯ ಹೋರಾಟದ ಫಲವೇ ಇಂದು ಸಂತ್ರಸ್ತರನ್ನು ಮತ್ತೆ ಕೆಲಸಕ್ಕೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯದರ್ಶಿ ಹೇಮಾ, ಉಪಾಧ್ಯಕ್ಷೆ ಪುಷ್ಪ, ಖಜಾಂಚಿ ಮಹಾಲಕ್ಷ್ಮಿ, ಸಂತ್ರಸ್ಯರಾದ ನಾಗಮ್ಮ, ಶಿವಮ್ಮ, ಸುಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು