12:47 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪದವಿನಂಗಡಿ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾವರ್ಧಂತಿ; ಕೋಲ ಸೇವೆ ಸಂಪನ್ನ

05/12/2023, 19:52

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ನಡೆಯಿತು.
ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.


ಅಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷದ್ರುವ ಫೌಂಡೇಶನ್ ನ ಸ್ಥಾಪಕಧ್ಯಾಕ್ಷ ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮಂಕಿಸ್ಟ್ಯಾಂಡ್ ಕಟೀಲ್ದಪ್ಪೆ ಸನ್ನಿದಿಯ ಅರ್ಚಕರಾದ ಪ್ರಾಣೇಶ್, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಸಂತ್ ಪೂಜಾರಿ, ಪ್ರಮುಖರಾದ ನವನೀತ್ ಕದ್ರಿ, ಕೆ.ಕೆ. ಪೇಜಾವರ್, ಪ್ರದೀಪ್ ಕುಮಾರ್ ಆಳ್ವ,, ಲೀಲಾಕ್ಷ ಕರ್ಕೇರ, ಉದ್ಯಮಿಗಳಾದ ಎಂ. ಅಶೋಕ್ ಶೇಟ್, ನವೀನ್ ಕುಮಾರ್, ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು