ಇತ್ತೀಚಿನ ಸುದ್ದಿ
ಚಳ್ಳಕೆರೆ: ಅತಿಥಿ ಉಪನ್ಯಾಸಕ ಬೇಡಿಕೆ ಈಡೇರಿಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ
06/12/2023, 12:40
ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಹಾಗೂ ಉಪನ್ಯಾಸಕರ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತರಗತಿ ಮುಂದುವರಿಸಲು ಆಗ್ರಹಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಚಳ್ಳಕೆರೆ ತಾಲೂಕಿನ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ ಪ್ರವಚನಗಳು ನಡೆಯದ ಹಿನ್ನೆಲೆಯಲ್ಲಿ ತರಗತಿಗಳನ್ನು ಎಂದಿನಂತೆ ಮುಂದುವರಿಸಲು ಒತ್ತಾಯಿಸಿ ನಗರದ ತಾಲೂಕು ಕಚೇರಿ ಮುಂದೆ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಸರ್ಕಾರ ಹಾಗೂ ವಿಟಿಯು ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡ ಭಾನುಪ್ರಕಾಶ್ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರು ಸೇರಿದಂತೆ ಕೇವಲ ಮೂರು ಜನ ಸರ್ಕಾರದಿಂದ ನೇಮಕಗೊಂಡ ಖಾಯಂ ಉಪನ್ಯಾಸಕರಿದ್ದು ಮೂರು ಬ್ರಾಂಚ್ ಗಳಲ್ಲಿ ಒಟ್ಟು 27 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ತಮ್ಮ ಖಾಯಂ ಹಾಗೂ ವೇತನ ಹೆಚ್ಚಳಕ್ಕಾಗಿ ಹಾಗೂ ಅವರಿಗೆ ವೇತನ ಸರಿಯಾಗಿ ಆಗುತ್ತಿಲ್ಲ ಅವರ ಜೀವನ ನಡೆಸಲು ವಾಗುತ್ತಿದೆ.ಅವರು ಮುಷ್ಕರ ನಡೆಸುತ್ತಿದ್ದು ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಇಂದಿನವರೆಗೂ ಸರಿಯಾದ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ತೊಂದರ ಉಂಟಾಗುತ್ತಿದೆ ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಸಲುವಾಗಿ ಶೀಘ್ರವಾಗಿ ಸಮಸ್ಯೆ ಇತ್ಯರ್ಥಪಡಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಿರಸ್ತಿದಾರ ಸದಾಶಿವಯ್ಯ ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಲಾಗಿದ್ದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಅತಿಥಿ ಉಪನ್ಯಾಸಕರು ಸಹ ನಮ್ಮ ಸಮಸ್ಯೆಗೆ.ಮತ್ತು ಬೇಡಿಕೆಗಳನ್ನು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳುಬೇಕೆಂದು ಶೀರಾಸ್ತಿದಾರ ರಿಗೆ ಮನಿವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ವಿನೋದ್, ಉದಯ್, ಪ್ರಸಾದ್, ಮಹಾಲಕ್ಷ್ಮಿ, ಸೋನಾ, ಹೇಮಾ, ರಕ್ಷಾ, ರೇಚಲ್, ಕೀರ್ತನಾ, ಸುಹಾಸ್, ಹೇಮಂತ್, ಸಂಜು, ಹೇಮಲತಾ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಾಗೆಯೇ ಅತಿಥಿ ಉಪನ್ಯಾಸಕರುಗಳಾದ ಶಿವು, ನಾಗಾರ್ಜುನ ಹಲವಾರು ಉಪಸ್ಥಿತರಿದ್ದರು.