7:02 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು