6:32 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಜೂಜಾಟ ಅಡ್ಡೆಯ ಮೇಲೆ ಪೊಲೀಸ್ ದಾಳಿ; 30 ಸಾವಿರಕ್ಕೂ ಅಧಿಕ ನಗದು, ಇಸ್ಪೀಟ್ ಎಲೆ ವಶ

06/12/2023, 21:31

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಗೋಪನಹಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಆರೋಪದ ಚಳ್ಳಕೆರೆ ಪೊಲೀಸರು ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, 31750 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿದ್ದಾರೆ.

ಚಳ್ಳಕೆರೆ ತಾಲೂಕು ಗೋಪನಹಳ್ಳಿ ಗ್ರಾಮದ ಕಡೆಯಿಂದ ಅಡವಿ
ಚಿಕ್ಕೇನಹಳ್ಳಿ, ಗ್ರಾಮದ ಕಡೆಗೆ ಹೋಗುವ ಜಮೀನಿನ ಕಚ್ಚಾ ರಸ್ತೆಯಲ್ಲಿ ಚಳ್ಳಕೆರೆಯ ರಹೀಂನಗರ ಮಹಬೂಬ್ ಭಾಷ ( 30 ) ಹಾಗೂ ಇತರರು ಗುಂಪಾಗಿ ಸೇರಿಕೊಂಡು ಕಾನೂನು ಬಾಹಿರವಾದ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಲಾಗಿದೆ. ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು