8:06 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಯುಕೋ ಬ್ಯಾಂಕ್ ಬಹುಕೋಟಿ ಐಎಂಪಿಎಸ್ ಹಗರಣ: ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ಸಿಬಿಐ ಶೋಧ; ಅಧಿಕಾರಿಗಳ ವಿಚಾರಣೆ

07/12/2023, 12:47

ಮಂಗಳೂರು(reporterkarnataka.com): ಯುಕೋ ಬ್ಯಾಂಕ್ ಬಹುಕೋಟಿ ಹಗರಣ ಸಂಬಂಧಿಸಿದಂತೆ ಸಿಬಿಐ ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ತನಿಖೆ ನಡೆಸಿದೆ.
ಯುಕೋ ಬ್ಯಾಂಕ್ ಖಾತೆಗಳಲ್ಲಿ 820 ಕೋಟಿ ರೂಪಾಯಿಗಳ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ತನಿಖೆ ನಡೆಸಿ ಶೋಧ ಕಾರ್ಯ ನಡೆಸಿದೆ.
ಬ್ಯಾಂಕ್ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹಾಗೂ ಆರೋಪಿಗಳನ್ನು ಸಿಬಿಐ ವಿಚಾರಣೆಗೊಳಪಡಿಸಿದೆ. ತನಿಖೆ ವೇಳೆ ಮೊಬೈಲ್ ಫೋನ್‌, ಲ್ಯಾಪ್‌ಟಾಪ್‌, ಕಂಪ್ಯೂಟರ್ ಸಿಸ್ಟಮ್‌ಗಳು, ಇಮೇಲ್ ಆರ್ಕೈವ್‌ಗಳು, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಯುಕೋ ಬ್ಯಾಂಕ್ ನಿಂದ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಅನುಮಾನಾಸ್ಪದ ಐಎಂಪಿಎಸ್ ವಹಿವಾಟಿನ ಆರೋಪದ ಮೇಲೆ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್‌ಗಳು ಮತ್ತು ಇತರ ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ಬ್ಯಾಂಕ್ ಖಾತೆದಾರರ 14,000 ಖಾತೆಗಳಿಂದ ಯುಕೊ ಬ್ಯಾಂಕ್ ನ 41,000 ಬ್ಯಾಂಕ್ ಖಾತೆಗಳಿಗೆ ಆಂತರಿಕ ಐಎಂಪಿಎಸ್ ವಹಿವಾಟಿನ ಮೂಲಕ ನವೆಂಬರ್ 10-13ರವರೆಗೆ 820 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಬ್ಯಾಂಕ್ ಖಾತೆಗಳಲ್ಲಿ ಇದ್ದಕ್ಕಿದ್ದ ಹಾಗೆ ಮೊತ್ತವನ್ನು ನೋಡಿದ ಕೆಲವು ಖಾತೆದಾರರು ಅದನ್ನು ಹಿಂಪಡೆದಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು