3:00 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಗೆ 78 ವರ್ಷದ ಹರ್ಷ

07/12/2023, 22:17

ಪುತ್ತೂರು(reporterkarnataka.com): ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು.
ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.
ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.
ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು