9:52 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು