9:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿಟ್ಟಿನ ಕ್ರಮ

04/08/2021, 19:06

ಮಂಗಳೂರು (reporterkarnataka.com): 

ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ
ನಿರ್ಬಂಧ ಹೇರಲಾಗಿದೆ. ವಾರಾಂತ್ಯದಲ್ಲಿ ವಸತಿಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. 

ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್-19 ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಆಗಸ್ಟ್ 5 ರಿಂದ ಆಗಸ್ಟ್ 15 ರವರೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ದೇವಸ್ಥಾನಗಳು ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಅಗತ್ಯ ಕೋವಿದ್ಯೆ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.

ವಾರಾಂತ್ಯ ಸಂಪೂರ್ಣ ನಿರ್ಬಂಧ
ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಎಲ್ಲಾ ರೀತಿಯ ಉತ್ಸವ ಸೇವೆಗಳು, ತೀರ್ಥ ಪ್ರಸಾದ, ಮುಡಿ ಸೇವೆಗಳನ್ನು ನಿರ್ಭಂಧಿಸಿ, ಆರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ವಸತಿ ಗೃಹಗಳಲ್ಲಿ ತಂಗಳು RTPCR ಟೆಸ್ಟ್ ಕಡ್ಡಾಯ :
ವಾರಾಂತ್ಯ ದಿನಗಳನ್ನು ಹೊರತುಪಡಿಸಿ (ಶನಿವಾರ ಮತ್ತು ಭಾನುವಾರ) ಉಳಿದ ದಿನಗಳಲ್ಲಿ ವಸತಿ ಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ RtPCR ಟೆಸ್ಟ್ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಾಗೂ ಕೋವಿಡ್ ಶಿಷ್ಟಾಚಾರ ನಿಯಮ ಪಾಲಿಸುವ ದೃಷ್ಟಿಯಿಂದ ಕೊಠಡಿಗಳಲ್ಲಿ ಕಡ್ಡಾಯವಾಗಿ ಹೆಚ್ಚುವರಿ ವ್ಯಕ್ತಿಗಳು ತಂಗಲು ಅವಕಾಶವಿರುವುದಿಲ್ಲ. ಎಲ್ಲಾ ಕೊಠಡಿಗಳನ್ನು ವಾಸ್ತವ್ಯಕ್ಕೆ ಮುಂಚೆ ಸ್ಯಾನಿಟೈಸ್ ಮಾಡತಕ್ಕದ್ದು ಹಾಗೂ ಭಕ್ತಾದಿಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು